Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:11 - ಕನ್ನಡ ಸತ್ಯವೇದವು C.L. Bible (BSI)

11 ಅವರನ್ನು ಕಾಪಾಡುವ ಸರ್ವೇಶ್ವರ ಬಲಶಾಲಿ, ಆತ ನಿನ್ನೊಡನೆ ವಾದಿಸಬಲ್ಲ ಅವರ ಪರವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ; ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಅವನ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:11
9 ತಿಳಿವುಗಳ ಹೋಲಿಕೆ  

ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


“ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು


ಉಪದೇಶವನ್ನು ಕೇಳುವುದರತ್ತ ಮನಸ್ಸಿಡು; ತಿಳುವಳಿಕೆಯ ಮಾತುಗಳಿಗೆ ಕಿವಿಗೊಡು.


ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು