Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:15 - ಕನ್ನಡ ಸತ್ಯವೇದವು C.L. Bible (BSI)

15 ಮಗನೇ, ನೀನು ಬುದ್ಧಿವಂತನಾದರೆ ಆನಂದವೇ ಆನಂದ ನನ್ನ ಮನಸ್ಸಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ, ನನಗೆ ಬಹು ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮಗನೇ, ನಿನ್ನ ಹೃದಯವು ಜ್ಞಾನವುಳ್ಳದ್ದಾಗಿದ್ದರೆ, ನನ್ನ ಹೃದಯವು ಹರ್ಷಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:15
20 ತಿಳಿವುಗಳ ಹೋಲಿಕೆ  

ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.


ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.


ಮಗನೇ, ನನ್ನ ಮಾತುಗಳನ್ನು ಅಂಗೀಕರಿಸು; ನಿಧಿಯಂತೆ ನನ್ನ ವಿಧಿಗಳನ್ನು ಕಾದಿರಿಸು.


ಮಗನೇ, ಪಾಪಿಗಳ ಪ್ರೇರಣೆಗೆ ಒಪ್ಪಿಗೆ ಕೊಡಲೇಬೇಡ.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಬುದ್ಧಿವಂತ ಮಗ ತಂದೆಯನ್ನು ಸಂತೋಷಗೊಳಿಸುತ್ತಾನೆ; ಬುದ್ಧಿಹೀನನು ಹೆತ್ತ ತಾಯಿಯನ್ನು ತಿರಸ್ಕರಿಸುತ್ತಾನೆ.


ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.


“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಮಗನೇ, ಜ್ಞಾನಗಳಿಸಿ ನನ್ನ ಮನಸ್ಸನ್ನು ಸಂತೋಷಪಡಿಸು; ಆಗ ನನ್ನ ನಿಂದಕರಿಗೆ ಸರಿಯಾದ ಉತ್ತರ ಸಿಕ್ಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು