Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:19 - ಕನ್ನಡ ಸತ್ಯವೇದವು C.L. Bible (BSI)

19 ಮಗನೇ ಕೇಳು, ಬುದ್ಧಿವಂತನಾಗಿರು, ನಿನ್ನ ಮನಸ್ಸನ್ನು ಸನ್ಮಾರ್ಗದತ್ತ ಹರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು [ಜ್ಞಾನ] ಮಾರ್ಗದಲ್ಲಿ ಮುಂದೆ ನಡೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಮಗನೇ, ಕಿವಿಗೊಟ್ಟು ಕೇಳಿ ಜ್ಞಾನಿಯಾಗಿರು. ಯಾವಾಗಲೂ ಎಚ್ಚರಿಕೆಯಿಂದಿದ್ದು ನೀತಿಮಾರ್ಗದಲ್ಲಿ ಜೀವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮಗನೇ, ಕೇಳಿ ಜ್ಞಾನವಂತನಾಗು; ನೀತಿ ಮಾರ್ಗದಲ್ಲಿ ನಿನ್ನ ಹೃದಯವನ್ನು ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:19
8 ತಿಳಿವುಗಳ ಹೋಲಿಕೆ  

ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


ಉಪದೇಶವನ್ನು ಕೇಳುವುದರತ್ತ ಮನಸ್ಸಿಡು; ತಿಳುವಳಿಕೆಯ ಮಾತುಗಳಿಗೆ ಕಿವಿಗೊಡು.


ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು.


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು.


ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು