Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:20 - ಕನ್ನಡ ಸತ್ಯವೇದವು C.L. Bible (BSI)

20 ಕುಡುಕರೊಡನೆ, ಹೊಟ್ಟೆಬಾಕರೊಡನೆ ಸೇರಬೇಡ; ಮಿತಿಮೀರಿ ಮಾಂಸ ತಿನ್ನುವ ಜನರ ಜೊತೆ ನಿನಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕುಡುಕರಲ್ಲಿಯೂ ಅತಿಮಾಂಸಭಕ್ಷಕರಲ್ಲಿಯೂ ಸೇರದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕುಡುಕರ ಮತ್ತು ಹೊಟ್ಟೆಬಾಕರ ಸ್ನೇಹಿತನಾಗಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅತಿ ಮದ್ಯಪಾನ ಮಾಡುವವರಲ್ಲಿ ಅತಿ ಮಾಂಸಭಕ್ಷರಲ್ಲಿಯೂ ಸೇರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:20
17 ತಿಳಿವುಗಳ ಹೋಲಿಕೆ  

ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ !


ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದುಕುಡಿಯಲಾರಂಭಿಸಿದರೆ,


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ !


ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.


ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.


ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು.


ತಡೆಯಲಾಗದ ಹಸಿವು ನಿನಗಿದ್ದರೂ ಕಂಠದಲ್ಲಿ ಕತ್ತಿಯಿರುವಂತೆ ಸಂಯಮದಿಂದಿರು.


ಭೋಗಾಸಕ್ತನು ಬಡವನಾಗುವನು, ಮಧ್ಯಸುಗಂಧಗಳನ್ನು ಬಯಸುವವನು ಧನವಂತನಾಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು