Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:21 - ಕನ್ನಡ ಸತ್ಯವೇದವು C.L. Bible (BSI)

21 ಕುಡುಕನಿಗೂ ಹೊಟ್ಟೆಬಾಕನಿಗೂ ಕಾದಿದೆ ದುರ್ಗತಿ; ಹರಕು ಬಟ್ಟೆಗಳನ್ನು ಹೊದಿಸುವುದು ಅವರ ನಿದ್ರಾಸಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕುಡುಕನೂ ಹೊಟ್ಟೆಬಾಕನೂ ದುರ್ಗತಿಗೆ ಬರುವರು; ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕುಡುಕರೂ ಹೊಟ್ಟೆಬಾಕರೂ ಬಡವರಾಗುವರು. ತಿಂದು ಕುಡಿದು ನಿದ್ರಿಸುವುದೇ ಅವರ ಕಾರ್ಯಗಳು. ಅವರು ಬಹು ಬೇಗನೆ ಬಡವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ಕುಡುಕರೂ ಹೊಟ್ಟೆಬಾಕರೂ ದುರ್ಗತಿಗೆ ಬರುವರು; ತೂಕಡಿಕೆಯು ಹರಕು ಬಟ್ಟೆಗಳನ್ನು ಹೊದಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:21
14 ತಿಳಿವುಗಳ ಹೋಲಿಕೆ  

ಭೋಗಾಸಕ್ತನು ಬಡವನಾಗುವನು, ಮಧ್ಯಸುಗಂಧಗಳನ್ನು ಬಯಸುವವನು ಧನವಂತನಾಗನು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.


ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.


ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.


ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು.


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ಅಮಲೇರಿದವರೇ, ಎಚ್ಚರಗೊಳ್ಳಿ; ಅತ್ತು ಪ್ರಲಾಪಿಸಿರಿ; ಕುಡುಕರೇ, ರೋದಿಸಿರಿ. ದ್ರಾಕ್ಷಾಬಳ್ಳಿ ನಾಶವಾಗಿದೆ; ಇನ್ನು ದ್ರಾಕ್ಷಾರಸ ದೊರಕದು.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ಸೋಮಾರಿಯಾದ ಕೆಲಸಗಳ್ಳನು, ಕೆಡುಕನಿಗೆ ರಕ್ತಸಂಬಂಧಿಕನು.


ಮೈಗಳ್ಳನ ಮನೆ ಅಂಕುಡೊಂಕಾಗಿರುತ್ತದೆ; ಸೋಮಾರಿಯ ಸೂರು ಸೋರುತ್ತಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು