Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:24 - ಕನ್ನಡ ಸತ್ಯವೇದವು C.L. Bible (BSI)

24 ನೀತಿವಂತನ ತಂದೆಗೆ ಅತಿ ಸಂತೋಷ; ಜ್ಞಾನಿಯನ್ನು ಹೆತ್ತವನಿಗೆ ಅತಿ ಉಲ್ಲಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಧರ್ಮಿಯ ತಂದೆಯು ಅತಿ ಸಂತೋಷಪಡುವನು; ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಳ್ಳೆಯವನ ತಂದೆಗೆ ಬಹು ಸಂತೋಷ. ಜ್ಞಾನಿಯಾದ ಮಗನಿಂದ ಆನಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀತಿವಂತನ ತಂದೆಯು ಬಹಳವಾಗಿ ಸಂತೋಷಪಡುವನು; ಜ್ಞಾನಿಯಾದ ಮಗುವನ್ನು ಪಡೆದವನಿಗೆ ಅವನಿಂದ ಆನಂದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:24
11 ತಿಳಿವುಗಳ ಹೋಲಿಕೆ  

ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಬುದ್ಧಿವಂತ ಮಗ ತಂದೆಯನ್ನು ಸಂತೋಷಗೊಳಿಸುತ್ತಾನೆ; ಬುದ್ಧಿಹೀನನು ಹೆತ್ತ ತಾಯಿಯನ್ನು ತಿರಸ್ಕರಿಸುತ್ತಾನೆ.


ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.


ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು.


ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಅವನು ಎಂಥವನಾದರೂ ನಾನು ಲೋಕದಲ್ಲಿ ಬುದ್ಧಿ ಖರ್ಚುಮಾಡಿ ಗಳಿಸಿದ ದುಡಿಮೆಯ ಫಲಕ್ಕೆಲ್ಲ ಅವನು ಒಡೆಯನಾಗುತ್ತಾನೆ. ಇದು ಸಹ ವ್ಯರ್ಥವೇ.


ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”


‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.


ಮಗನೇ, ಜ್ಞಾನಗಳಿಸಿ ನನ್ನ ಮನಸ್ಸನ್ನು ಸಂತೋಷಪಡಿಸು; ಆಗ ನನ್ನ ನಿಂದಕರಿಗೆ ಸರಿಯಾದ ಉತ್ತರ ಸಿಕ್ಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು