Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:26 - ಕನ್ನಡ ಸತ್ಯವೇದವು C.L. Bible (BSI)

26 ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕಂದಾ, ನನ್ನ ಕಡೆಗೆ ಮನಸ್ಸುಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ಮಗನೇ, ನನ್ನ ಉಪದೇಶವನ್ನು ಗಮನವಿಟ್ಟು ಕೇಳು. ನನ್ನ ಜೀವಿತವು ನಿನಗೆ ಮಾದರಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:26
17 ತಿಳಿವುಗಳ ಹೋಲಿಕೆ  

ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.


ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು