Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:28 - ಕನ್ನಡ ಸತ್ಯವೇದವು C.L. Bible (BSI)

28 ಆಕೆ ಕಳ್ಳನಂತೆ ಹೊಂಚುಹಾಕುತ್ತಾಳೆ; ಅನೇಕರನ್ನು ದ್ರೋಹಿಗಳನ್ನಾಗಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಕೆಟ್ಟಹೆಂಗಸು ಕಳ್ಳನಂತೆ ನಿನಗಾಗಿ ಕಾದಿರುವಳು. ಅನೇಕ ಗಂಡಸರ ಪಾಪಕ್ಕೆ ಅವಳೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕಳ್ಳನಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:28
15 ತಿಳಿವುಗಳ ಹೋಲಿಕೆ  

ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.


ಹೊಂಚುಹಾಕುತ್ತಾಳೆ ಅವಳು ಮೂಲೆ ಮೂಲೆಗಳಲ್ಲಿ; ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ.


ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು.


“ಮದ್ಯಪಾನ, ದ್ರಾಕ್ಷಾರಸ - ಇವು ಜನರನ್ನು ಬುದ್ಧಿಹೀನರನ್ನಾಗಿ ಮಾಡುತ್ತವೆ.


ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಸರ್ವೇಶ್ವರನಿಗೆ ಸಿಟ್ಟೆಬ್ಬಿಸಿದವನು ಬೀಳುವನು ಅದರಲ್ಲಿ.


ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.


ಅವನಿಗೆ ತಿಳಿಯದು ಅವಳ ಮನೆ ಪ್ರೇತನಿವಾಸವೆಂದು, ಅವಳ ಅತಿಥಿಗಳು ಬಿದ್ದಿರುವುದು ಅಗಾಧ ಪಾತಾಳದಲ್ಲೆಂದು.


ಇಸ್ರಯೇಲರು ಶಿಟ್ಟೀಮಿನಲ್ಲಿ ವಾಸಮಾಡುತ್ತಿದ್ದಾಗ ಮೋವಾಬ್ ಮಹಿಳೆಯರೊಡನೆ ಸಹವಾಸ ಮಾಡತೊಡಗಿದರು.


ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!


ಆಕೆ ಜೋಸೆಫನ ಸಂಗಡ ದಿನದಿನವೂ ಅದೇ ಮಾತನ್ನು ಎತ್ತುತ್ತಿದ್ದಳು. ಆದರೆ ಅವನು ಅವಳಿಗೆ ಕಿವಿಗೊಡಲಿಲ್ಲ. ಇವಳ ಸಂಸರ್ಗಕ್ಕಾಗಲಿ ಅವಳ ಬಳಿ ಇರುವುದಕ್ಕಾಗಲಿ ಒಪ್ಪಲಿಲ್ಲ.


ಇಗೋ, ಅವನನ್ನು ಎದುರುಗೊಳ್ಳುತ್ತಾಳೆ ವೇಷಧಾರಿಯಾದ ಕಪಟಸ್ತ್ರೀಯೊಬ್ಬಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು