Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:35 - ಕನ್ನಡ ಸತ್ಯವೇದವು C.L. Bible (BSI)

35 “ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ; ಬಡಿದರೂ ನನಗೆ ತಿಳಿಯಲಿಲ್ಲ; ಎಚ್ಚರವಾಗುವುದು ಯಾವಾಗ? ಮತ್ತೆ ಒಂದು ಸಾರಿ ಕುಡಿಯುವೆನು” ಎಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ; ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಅವರು ನನಗೆ ಬಡಿದರೂ ಗೊತ್ತಾಗಲಿಲ್ಲ; ಅವರು ನನಗೆ ಹೊಡೆದರೂ ನನಗೆ ಬಡಿದರೂ ಅರಿವಾಗಲಿಲ್ಲ. ಈಗ ನಾನು ಎಚ್ಚರಗೊಳ್ಳಲಾರೆ. ನನಗೆ ಮತ್ತಷ್ಟು ದ್ರಾಕ್ಷಾರಸಬೇಕು” ಎಂದು ನೀನು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಜನರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ನಾನು ಎಚ್ಚರವಾಗುವುದು ಯಾವಾಗ? ಪುನಃ ನಾನು ಅದನ್ನು ಕುಡಿದೇನು?” ಎಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:35
11 ತಿಳಿವುಗಳ ಹೋಲಿಕೆ  

ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು.


ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿ ಬರುವುದು; ಮೂಢನು ತಾನು ಮಾಡಿದ ಮೂರ್ಖತನಕ್ಕೆ ಹಿಂದಿರುಗುವನು.


“ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹೋಯಿತು,” ಮತ್ತು “ಮೈ ತೊಳೆದ ಹಂದಿ ಕೊಳಚೆಯಲ್ಲಿ ಹೊರಳಲು ಹೋಯಿತು,” ಎಂಬ ಈ ಗಾದೆಗಳು ಇವರಿಗೆ ಸರಿಯಾಗಿ ಅನ್ವಯಿಸುತ್ತವೆ.


ಲಜ್ಜೆಗೆಟ್ಟವರಾಗಿ ದುರಿಚ್ಛೆಗಳಿಗೆ ಮಾರುಹೋಗಿದ್ದಾರೆ; ಅಶುದ್ಧ ಕಾರ್ಯಗಳಲ್ಲೇ ನಿರತರಾಗಿದ್ದಾರೆ.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ನೀನು ಸಮುದ್ರ ಮಧ್ಯದಲ್ಲಿ ಮಲಗಿ ಇರುವವನಂತೆ ಇರುವೆ, ಹಡಗಿನ ಕಂಬದ ತುದಿಯಲ್ಲಿ ನಿದ್ರಿಸುವವನಂತೆ ಇರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು