Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:5
17 ತಿಳಿವುಗಳ ಹೋಲಿಕೆ  

ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.


ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.


“ವ್ಯರ್ಥವೇ ವ್ಯರ್ಥ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.


ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ!


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ


“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು