Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:7 - ಕನ್ನಡ ಸತ್ಯವೇದವು C.L. Bible (BSI)

7 ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ; ಉಣ್ಣು, ಕುಡಿ, ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ, ಅವನು ಎಲ್ಲದಕ್ಕೂ ಬೆಲೆ ಕಟ್ಟುವ ಯೋಚನೆಯುಳ್ಳವನಂತೆ ಇದ್ದಾನೆ; ಅವನು, “ತಿನ್ನು, ಕುಡಿ,” ಎಂದು ಹೇಳುತ್ತಾನೆ; ಆದರೆ ಅವನ ಹೃದಯವು ನಿನ್ನೊಂದಿಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:7
12 ತಿಳಿವುಗಳ ಹೋಲಿಕೆ  

ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ಆಕೆ ಇನ್ನೊಮ್ಮೆ ಅವನಿಗೆ, “ನಿನ್ನನ್ನು ಪ್ರೀತಿಸುತ್ತೇನೆ” ಎಂದು ನೀವು ನನಗೆ ಹೇಗೆ ಹೇಳಬಹುದು? ನಿಮ್ಮ ಮನಸ್ಸು ನನ್ನ ಮೇಲೆ ಇಲ್ಲವೇ ಇಲ್ಲ; ಮೂರು ಸಾರಿ ವಂಚಿಸಿದಿರಿ. ನಿಮಗೆ ಇಂಥ ಮಹಾಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ,” ಎಂದಳು.


ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.


ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.


ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.


ಹಗೆಗಾರನ ತುಟಿಯಲ್ಲಿ ಸ್ನೇಹಭಾವದ ನಟನೆ; ಹೊಟ್ಟೆಯಲ್ಲಾದರೊ ಹುದುಗಿದೆ ವಂಚನೆ.


ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ.


ಕೆಟ್ಟ ಹೃದಯದಿಂದ ಸವಿನುಡಿಯು ತುಟಿ, ಬೆಳ್ಳಿ ಮೆರುಗಿನಿಂದ ಥಳಿಸುವ ಮಣ್ಣಿನ ಬೋಕಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು