Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:9 - ಕನ್ನಡ ಸತ್ಯವೇದವು C.L. Bible (BSI)

9 ಮೂಢನ ಸಂಗಡ ಮಾತನಾಡಬೇಡ; ನಿನ್ನ ಬುದ್ಧಿಮಾತನ್ನು ಅವನು ಮಾನ್ಯಮಾಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೂಢನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೂಢನಿಗೆ ಉಪದೇಶಿಸಲು ಪ್ರಯತ್ನಿಸಬೇಡ. ಅವನು ನಿನ್ನ ಜ್ಞಾನದ ಮಾತುಗಳನ್ನು ಗೇಲಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬುದ್ಧಿಹೀನರ ಸಂಗಡ ಮಾತಾಡಬೇಡ; ಏಕೆಂದರೆ ನಿನ್ನ ಜ್ಞಾನದ ಮಾತುಗಳನ್ನು ಅವರು ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:9
17 ತಿಳಿವುಗಳ ಹೋಲಿಕೆ  

“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ರಾಜ ಹಿಜ್ಕೀಯನು ಆಜ್ಞಾಪಿಸಿದ್ದರಿಂದ ಆ ಮೂವರು ಏನನ್ನು ಹೇಳದೆ ಸುಮ್ಮನಿದ್ದರು.


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.


ಮೂರ್ಖನಿಂದ ದೂರವಿರು; ಜ್ಞಾನವಚನ ಅವನಲ್ಲಿ ಕಾಣಸಿಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು