Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:10 - ಕನ್ನಡ ಸತ್ಯವೇದವು C.L. Bible (BSI)

10 ಆಪತ್ತುಕಾಲದಲ್ಲಿ ನೀನು ಎದೆಗುಂದಿದವನಾದರೆ ನಿನ್ನ ಬಲವು ಅಸಮರ್ಪಕವಾದುದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವೂ ಇಕ್ಕಟ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕಷ್ಟದ ಸಮಯಗಳಲ್ಲಿ ನೀನು ಬಲಹೀನನಾಗಿದ್ದರೆ, ನೀನು ನಿಜವಾಗಿಯೂ ಬಲಹೀನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ, ನಿನ್ನ ಬಲವು ಕೊಂಚವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:10
11 ತಿಳಿವುಗಳ ಹೋಲಿಕೆ  

ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!


ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ಶಿಷ್ಯರು ಊಟಕ್ಕೆ ಏನಾದರೂ ಕೊಂಡುತರುವುದಕ್ಕೆ ಊರಿನೊಳಗೆ ಹೋಗಿದ್ದರು.


ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು