Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:13 - ಕನ್ನಡ ಸತ್ಯವೇದವು C.L. Bible (BSI)

13 ಮಗನೇ, ಜೇನು ತಿನ್ನು, ಅದು ಚೆನ್ನಾಗಿದೆ; ತೊಟ್ಟಿಕ್ಕುವ ಜೇನುತುಪ್ಪ ನಿನ್ನ ಬಾಯಿಗೆ ಸಿಹಿ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ. ಅದನ್ನು ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಮಗನೇ, ಜೇನುತುಪ್ಪವನ್ನು ತಿನ್ನು, ಅದು ಒಳ್ಳೆಯದು. ಜೇನುಗೂಡಿನ ಜೇನುತುಪ್ಪ ಸಿಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ; ಜೇನು ಗೂಡಿನ ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:13
12 ತಿಳಿವುಗಳ ಹೋಲಿಕೆ  

ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಜೇನು ಸಿಕ್ಕಿದರೆ ಅಳತೆಯಿಂದ ತಿನ್ನು, ಮಿತಿಮೀರಿದರೆ ವಾಂತಿಯಾದೀತು.


ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಗೌರವದ ಮೇಲೆ ಗೌರವ ಬಯಸುವುದು ಸರಿಯಲ್ಲ.


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ಹೊಟ್ಟೆ ತುಂಬಿದವನಿಗೆ ಜೇನುಕೊಟ್ಟರೂ ಕಹಿ; ಹೊಟ್ಟೆ ಹಸಿದವನಿಗೆ ಏನು ಕೊಟ್ಟರು ಸಿಹಿ.


ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬುದನ್ನು ಅವರಿಗೆ ತಿಳಿಸಲಿಲ್ಲ.


ಯೋನಾತಾನನಿಗೆ ತನ್ನತಂದೆ ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ ಕೈಯಿಂದ ತೆಗೆದು ತಿಂದನು. ಕೂಡಲೆ ಅವನ ಕಣ್ಣುಗಳು ಕಳೆಗೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು