Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:14 - ಕನ್ನಡ ಸತ್ಯವೇದವು C.L. Bible (BSI)

14 ಅಂತೆಯೇ ಜ್ಞಾನ ನಿನ್ನ ಆತ್ಮಕ್ಕೆ ಸಿಹಿಯೆಂದು ತಿಳಿ; ಅದನ್ನು ಪಡೆದೆಯಾದರೆ ನಿನ್ನ ಭವಿಷ್ಯ ಶುಭಕರ, ನಿನ್ನ ನಿರೀಕ್ಷೆ ಆಗದು ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವದೆಂದು ತಿಳಿದುಕೋ; ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ. ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ. ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:14
12 ತಿಳಿವುಗಳ ಹೋಲಿಕೆ  

ಆಗ ನಿನ್ನ ಭವಿಷ್ಯ ಶುಭದಾಯಕವಾಗಿರುವುದು, ನಿನ್ನ ನಿರೀಕ್ಷೆ ಸಾರ್ಥಕವಾಗುವುದು.


ಜ್ಞಾನ ಉದಯಿಸುವುದು ನಿನ್ನ ಹೃದಯದೊಳಗೆ, ತಿಳುವಳಿಕೆ ಬೆಳಗುವುದು ನಿನ್ನ ಆತ್ಮದೊಳಗೆ.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ಆ ನುಡಿಗಳನ್ನು ನಿನ್ನ ಅಂತರಂಗದಲ್ಲಿ ಕಾದಿಡು; ಅವು ನಿನ್ನ ತುಟಿಯ ಮೇಲೆ ಸಿದ್ಧವಿದ್ದರೆ ಒಳಿತು.


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು