Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:15 - ಕನ್ನಡ ಸತ್ಯವೇದವು C.L. Bible (BSI)

15 ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ; ಅವನ ನಿವಾಸವನ್ನು ಸೂರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:15
16 ತಿಳಿವುಗಳ ಹೋಲಿಕೆ  

ಅದು ಸೌಲನಿಗೆ ತಿಳಿದುಬಂದಿತು. ಅವರು ಅವನನ್ನು ಕೊಲ್ಲಲು ಹಗಲಿರುಳು ಪಟ್ಟಣದ ದ್ವಾರಗಳನ್ನು ಕಾಯುತ್ತಿದ್ದರು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.


ಈ ಒಳಸಂಚು ಪೌಲನ ಸೋದರಿಯ ಮಗನ ಕಿವಿಗೆ ಬಿದ್ದಿತು. ಅವನು ಕೋಟೆಯೊಳಗೆ ಹೋಗಿ ಅದನ್ನು ಪೌಲನಿಗೆ ತಿಳಿಸಿದನು.


ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಸಮಾಲೋಚಿಸಿಕೊಂಡರು.


ನಿನ್ನ ಪೂರ್ವಜರು ಹಾಕಿರುವ ಎಲ್ಲೆ ಗುರುತನ್ನು, ಸ್ಥಳಾಂತರಿಸಬೇಡ ನೀನು.


ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;


ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II


ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II


ದುಷ್ಟನಿಟ್ಟಿರುವನು ಕಣ್ಣನು ಸಜ್ಜನರ ಮೇಲೆ I ಹೊಂಚುಹಾಕಿ ನೋಡುತಿಹನು ಮಾಡಲವರ ಕೊಲೆ II


ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು