Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:3 - ಕನ್ನಡ ಸತ್ಯವೇದವು C.L. Bible (BSI)

3 ಮನೆಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಗೊಳಿಸುವುದಕ್ಕೆ ವಿವೇಕವೇ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮನೆಯನ್ನು ಕಟ್ಟುವದಕ್ಕೆ ಜ್ಞಾನವೇ ಸಾಧನ; ಅದನ್ನು ಸ್ಥಿರಪಡಿಸುವದಕ್ಕೆ ವಿವೇಕವೇ ಆಧಾರ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಳ್ಳೆಯ ಮನೆಯು ಜ್ಞಾನದ ಮೇಲೂ ವಿವೇಕದ ಮೇಲೂ ಕಟ್ಟಲ್ಪಟ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜ್ಞಾನದಿಂದ ಮನೆಯು ಕಟ್ಟಲಾಗುತ್ತದೆ. ತಿಳುವಳಿಕೆಯಿಂದ ಅದು ಸ್ಥಿರಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:3
6 ತಿಳಿವುಗಳ ಹೋಲಿಕೆ  

ಬುದ್ಧಿವಂತೆ ತನ್ನ ಮನೆಯನ್ನು ಕಟ್ಟೆಬ್ಬಿಸುತ್ತಾಳೆ; ಬುದ್ಧಿಹೀನೆ ಅದನ್ನು ಕೈಯಿಂದ ಕೆಡವಿಹಾಕುತ್ತಾಳೆ.


ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.


ಜ್ಞಾನವೆಂಬಾಕೆ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಅದಕ್ಕೆ ಏಳು ಸ್ತಂಭಗಳನ್ನು ಕೆತ್ತಿಸಿದ್ದಾಳೆ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


‘ಸರ್ವಶಕ್ತರಾದ ಸರ್ವೆಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು