Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:31 - ಕನ್ನಡ ಸತ್ಯವೇದವು C.L. Bible (BSI)

31 ಅವುಗಳಲ್ಲಿ ಮುಳ್ಳುಗಿಡಗಳು ಹರಡಿಕೊಂಡಿದ್ದವು, ಕಳೆಗಳು ಮುಚ್ಚಿಕೊಂಡಿದ್ದವು, ಕಲ್ಲಿನಗೋಡೆ ಹಾಳಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು; ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:31
16 ತಿಳಿವುಗಳ ಹೋಲಿಕೆ  

ಮೈಗಳ್ಳನ ಮನೆ ಅಂಕುಡೊಂಕಾಗಿರುತ್ತದೆ; ಸೋಮಾರಿಯ ಸೂರು ಸೋರುತ್ತಿರುತ್ತದೆ.


ಜುದೇಯದವರಿಗೂ ಜೆರುಸಲೇಮಿನವರಿಗೂ ಸರ್ವೇಶ್ವರ ಹೇಳುವುದೇನೆಂದರೆ - “ಪಾಳುಬಿದ್ದ ನಿಮ್ಮ ಹೊಲಗದ್ದೆಗಳನ್ನು ಉತ್ತು ಹದಮಾಡಿ, ಮುಳ್ಳುಗಳ ನಡುವೆ ಬಿತ್ತಬೇಡಿ.


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು.


ಕುಡುಕನಿಗೂ ಹೊಟ್ಟೆಬಾಕನಿಗೂ ಕಾದಿದೆ ದುರ್ಗತಿ; ಹರಕು ಬಟ್ಟೆಗಳನ್ನು ಹೊದಿಸುವುದು ಅವರ ನಿದ್ರಾಸಕ್ತಿ.


“ಹೊರಗಡೆ ಕಾದಿದೆ ಸಿಂಹ, ಬೀದಿಗೆ ಕಾಲಿಟ್ಟರೆ ತಿಂದುಬಿಡುವುದು!” ಇದು ಮೈಗಳ್ಳನ ಪಿಳ್ಳೆಯ ನೆವ.


ಮೈಗಳ್ಳನು ಮಳೆಗಾಲದಲ್ಲೂ ಹೊಲ ಉಳಲಾರನು; ಸುಗ್ಗಿಕಾಲದಲ್ಲಿ ಅಂಗಲಾಚಿದರೂ ಅವನಿಗೆ ಬೆಳೆಸಿಗಲಾರದು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.


ಅದು ಬೆಳೆಯಲಿ ಮುಳ್ಳುಗಳನ್ನು ಗೋದಿಗೆ ಬದಲಾಗಿ ಹಣಜಿಹುಲ್ಲನು ಜವೆಗೋದಿಗೆ ಪ್ರತಿಯಾಗಿ.” ಇತಿ, ಯೋಬನ ಮಾತುಗಳು ಮುಗಿದವು.


ಅರಚಿಕೊಳ್ಳುತ್ತಿದ್ದರು ಪೊದೆಗಳ ನಡುವೆ ಕೂಡಿಕೊಳ್ಳುತ್ತಿದ್ದರು ಮುಳ್ಳುಗಿಡಗಳ ಕೆಳಗೆ.


ಅದನ್ನು ನೋಡಿ ಚಿಂತಿಸತೊಡಗಿದೆ; ಆ ದೃಶ್ಯದಿಂದ ಈ ಪಾಠ ಕಲಿತೆ:


ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು