Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:6 - ಕನ್ನಡ ಸತ್ಯವೇದವು C.L. Bible (BSI)

6 ಬುದ್ಧಿವಂತನು ನಾಯಕನನ್ನಿಟ್ಟು ಯುದ್ಧ ನಡೆಸುವನು; ಸುಮಂತ್ರಿಗಳು ಹಲವರಿದ್ದರೆ ಸಂರಕ್ಷಣೆಯಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮಂತ್ರಾಲೋಚನೆಯಿಂದ ಯುದ್ಧವನ್ನು ನಡಿಸು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಖಂಡಿತವಾಗಿಯೂ ನಿಮಗೆ ಯುದ್ಧಮಾಡಲು ಮಾರ್ಗದರ್ಶನ ಬೇಕು, ಬಹುಮಂದಿ ಸಲಹೆಗಾರರು ಇರುವಲ್ಲಿ ಜಯವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:6
9 ತಿಳಿವುಗಳ ಹೋಲಿಕೆ  

ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.


ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.


ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.


ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ?


ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದರು. ಈ ಕಾರಣ ಸರ್ವೇಶ್ವರನಿಗೆ ದ್ರೋಹಿಯಾಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು