Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:12 - ಕನ್ನಡ ಸತ್ಯವೇದವು C.L. Bible (BSI)

12 ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:12
16 ತಿಳಿವುಗಳ ಹೋಲಿಕೆ  

ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.


ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಉಂಟುಮಾಡಿದವ ಸರ್ವೇಶ್ವರ.


ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು.


ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ಅದಕ್ಕೆ ಆರೋನನು, “ನಿಮ್ಮ ಹೆಂಡತಿಯರು, ಗಂಡುಮಕ್ಕಳು ಹಾಗು ಹೆಣ್ಣುಮಕ್ಕಳು ಹಾಕಿಕೊಂಡಿರುವ ಚಿನ್ನದ ಕಿವಿಯೋಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ,” ಎಂದನು.


ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಸೌಲನಿಗಾಗಿ ಅತ್ತು ಪ್ರಲಾಪಿಸಿರಿ ಇಸ್ರಯೇಲಿನ ಮಹಿಳೆಯರೇ, ಉಲ್ಲಾಸಕರ ರಕ್ತಾಂಬರಗಳ ಉಡಿಸಿದವನು ಅವನೇ ಅಲ್ಲವೆ ನಿಮಗೆ? ಅವುಗಳ ಮೇಲೆ ಸುವರ್ಣಾಂಬರಗಳ ತೊಡಿಸಿದವನು ಆತನೇ ಅಲ್ಲವೆ ನಿಮಗೆ?


ಹೊನ್ನಾಗಲಿ, ಗಾಜಾಗಲಿ ಅದಕ್ಕೆ ಸಮವಾದೀತೆ? ಚಿನ್ನಾಭರಣಗಳನ್ನು ಅದಕ್ಕೆ ಅದಲುಬದಲು ಮಾಡಿಕೊಡಲಾದೀತೆ?


ಅಜ್ಞಾನಿಗಳ ಸ್ತುತಿಗೀತೆಗಿಂತ ಸುಜ್ಞಾನಿಗಳ ಗದರಿಕೆ ಲೇಸು.


ಕೊರಳಿಗೆ ಮಾಲೆಯನ್ನು, ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು