Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:15 - ಕನ್ನಡ ಸತ್ಯವೇದವು C.L. Bible (BSI)

15 ಸಹನಶೀಲತೆಯಿಂದ ಅರಸನನ್ನೂ ಒಲಿಸಿಕೊಳ್ಳಬಹುದು; ಮೃದುವಾದ ನಾಲಿಗೆ ಎಲುಬನ್ನೂ ಮುರಿಯಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು; ಮೃದುವಚನವು ಎಲುಬನ್ನು ಮುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:15
9 ತಿಳಿವುಗಳ ಹೋಲಿಕೆ  

ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.


ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮ ವಿಚಾರಕ್ಕಾಗಿ ದೂತರನ್ನು ಕಳುಹಿಸಿದ್ದನು. ದಣಿಯವರು ಬಂದವರನ್ನು ಚೆನ್ನಾಗಿ ಬೈದು ಕಳಿಸಿದರು.


ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬುದನ್ನು ಅವರಿಗೆ ತಿಳಿಸಲಿಲ್ಲ.


ಅದು ನಿನ್ನ ಸಂಗಡ ಸವಿಮಾತಾಡೀತೆ? ನಿನಗೆ ವಿನಮ್ರ ವಿಜ್ಞಾಪನೆ ಮಾಡೀತೆ?


ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು