Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:16 - ಕನ್ನಡ ಸತ್ಯವೇದವು C.L. Bible (BSI)

16 ಜೇನು ಸಿಕ್ಕಿದರೆ ಅಳತೆಯಿಂದ ತಿನ್ನು, ಮಿತಿಮೀರಿದರೆ ವಾಂತಿಯಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜೇನು ಸಿಕ್ಕಿತೋ? ವಿುತವಾಗಿ ತಿನ್ನು, ಹೊಟ್ಟೆತುಂಬ ತಿಂದರೆ ಕಾರಿಬಿಟ್ಟೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೇನುತುಪ್ಪ ಒಳ್ಳೆಯದು. ಆದರೆ ಅತಿಯಾಗಿ ತಿನ್ನಬೇಡ. ಇಲ್ಲವಾದರೆ, ಕಾಯಿಲೆಬೀಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:16
11 ತಿಳಿವುಗಳ ಹೋಲಿಕೆ  

ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಗೌರವದ ಮೇಲೆ ಗೌರವ ಬಯಸುವುದು ಸರಿಯಲ್ಲ.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.


ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.


ನೀನು ತಿಂದ ತುತ್ತನ್ನೆ ಕಕ್ಕಿ ಬಿಡುವೆ, ನೀನು ಆಡಿದ ಸವಿಮಾತೆಲ್ಲ ವ್ಯರ್ಥವೆ.


ಪದೇ ಪದೇ ನೆರೆಯವನ ಮನೆಗೆ ಹೋಗಬೇಡ, ಬೇಸರಗೊಂಡು ನಿನ್ನನ್ನು ಹಗೆಮಾಡಾನು.


ಧರ್ಮಿಷ್ಠನಾಗಿ ಬಾಳುವುದರಲ್ಲಿ ಆಗಲಿ, ಜ್ಞಾನಾರ್ಜನೆಯಲ್ಲಾಗಲಿ ಮಿತಿಮೀರಿ ವರ್ತಿಸಬೇಡ; ನಿನ್ನನ್ನು ನೀನೇ ವಿನಾಶಕ್ಕೆ ಗುರಿಮಾಡಿಕೊಳ್ಳಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು