Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:18 - ಕನ್ನಡ ಸತ್ಯವೇದವು C.L. Bible (BSI)

18 ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಕೊಡತಿಗೆ, ಕತ್ತಿಗೆ, ಹರಿತವಾದ ಬಾಣಕ್ಕೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳುವವನು ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:18
12 ತಿಳಿವುಗಳ ಹೋಲಿಕೆ  

ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ಅವರ ನಾಲಿಗೆ ಕೊಲ್ಲುವ ಬಾಣ, ಅದು ಆಡುವುದು ಸುಳ್ಳನ್ನೇ ಬಾಯಲ್ಲಿ ಶುಭವೆಂದು ಹೇಳಿದರೂ ಹೃದಯದಲ್ಲಿ ಒಡ್ಡಿದ್ದಾರೆ ಹೊಂಚನ್ನೇ.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ನೆರೆಯವನಿಗೆ ವಿರುದ್ಧ ಆಧಾರವಿಲ್ಲದ ಸಾಕ್ಷಿಹೇಳಬೇಡ; ಮಾತಿನಲ್ಲಿ ಅವನಿಗೆ ಮೋಸಮಾಡಬೇಡ.


ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.


ಪದೇ ಪದೇ ನೆರೆಯವನ ಮನೆಗೆ ಹೋಗಬೇಡ, ಬೇಸರಗೊಂಡು ನಿನ್ನನ್ನು ಹಗೆಮಾಡಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು