Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:23 - ಕನ್ನಡ ಸತ್ಯವೇದವು C.L. Bible (BSI)

23 ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಡಗಣಗಾಳಿ ಮಳೆ ಬರಮಾಡುವದು; ಚಾಡಿಯ ನಾಲಿಗೆ ಕೋಪದ ಮುಖ ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:23
8 ತಿಳಿವುಗಳ ಹೋಲಿಕೆ  

ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.


ಅವರು ಹರಟೆಮಲ್ಲರು, ಚಾಡಿಕೋರರು, ದೇವದ್ರೋಹಿಗಳು, ಗರ್ವಿಗಳು, ಅಹಂಕಾರಿಗಳು, ಜಂಭಕೊಚ್ಚಿಕೊಳ್ಳುವವರು, ಕೇಡುಬಗೆಯುವವರು, ತಂದೆತಾಯಿಗಳಿಗೆ ಅವಿಧೇಯರು ಆಗಿದ್ದಾರೆ.


ಸೌದೆಯಿಲ್ಲದಿದ್ದರೆ ಬೆಂಕಿ ಆರುವುದು; ಚಾಡಿಕೋರನಿಲ್ಲದಿದ್ದರೆ ಜಗಳ ಶಮನವಾಗುವುದು.


ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II


ಉತ್ತರದಿಂದ ಹೊನ್ನಿನ ಹೊಳಪು ಹೊರಡುವುದು ದೇವರು ವಿಸ್ಮಯಕರ ತೇಜಸ್ಸನು ಧರಿಸಿರುವನು.


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಅಣಕಿಸಿ ಹಾಸ್ಯಮಾಡಿದರು ಕೀಟಲೆಗಾರರಂತೆ I ಕಟಕಟನೆ ಹಲ್ಲುಕಡಿದರು ಕಡುಕೋಪಿಗಳಂತೆ II


ದೇವರ ಭಂಡಾರದಿಂದ ಬಿರುಗಾಳಿ ಬೀಸುತ್ತದೆ ಉತ್ತರ ದಿಕ್ಕಿನಿಂದ ಚಳಿ ಹೊರಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು