Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:27 - ಕನ್ನಡ ಸತ್ಯವೇದವು C.L. Bible (BSI)

27 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಗೌರವದ ಮೇಲೆ ಗೌರವ ಬಯಸುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವದು ಮಾನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:27
8 ತಿಳಿವುಗಳ ಹೋಲಿಕೆ  

ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ನಿನ್ನ ಬಾಯಿ ಅಲ್ಲ, ಬೇರೆಯವರು ಹೊಗಳಲಿ ನಿನ್ನ; ಆತ್ಮಸ್ತುತಿ ಸಲ್ಲ, ಅನ್ಯರು ಸ್ತುತಿಸಲಿ ನಿನ್ನ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ಜೇನು ಸಿಕ್ಕಿದರೆ ಅಳತೆಯಿಂದ ತಿನ್ನು, ಮಿತಿಮೀರಿದರೆ ವಾಂತಿಯಾದೀತು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು