Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:3 - ಕನ್ನಡ ಸತ್ಯವೇದವು C.L. Bible (BSI)

3 ಆಕಾಶವು ಉನ್ನತ, ಭೂಮಿಯು ಅಗಾಧ, ಅಂತೆಯೇ ರಾಜರ ಮನಸ್ಸು ಅಗೋಚರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕಾಶವು ಉನ್ನತ, ಭೂಮಿಯು ಅಗಾಧ, ರಾಜರ ಹೃದಯವು ಅಗೋಚರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕಾಶವು ಉನ್ನತ, ಭೂವಿುಯು ಅಗಾಧ, ರಾಜರ ಹೃದಯವು ಅಗೋಚರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. ಹಾಗೆಯೇ ಅರಸರ ಹೃದಯವು ಅಗೋಚರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:3
8 ತಿಳಿವುಗಳ ಹೋಲಿಕೆ  

ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.


“ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.


“ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು.” ಎಂದರು.


ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.


ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ದಕ್ಕುವುದು ಚೊಕ್ಕ ಒಡವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು