Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:11 - ಕನ್ನಡ ಸತ್ಯವೇದವು C.L. Bible (BSI)

11 ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿ ಬರುವುದು; ಮೂಢನು ತಾನು ಮಾಡಿದ ಮೂರ್ಖತನಕ್ಕೆ ಹಿಂದಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿಕೊಳ್ಳುವ ಹಾಗೆ ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹಿಂತಿರುಗುವಂತೆ ಮೂಢನು ತನ್ನ ಮೂಢತನವನ್ನು ಪದೇಪದೇ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:11
7 ತಿಳಿವುಗಳ ಹೋಲಿಕೆ  

“ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹೋಯಿತು,” ಮತ್ತು “ಮೈ ತೊಳೆದ ಹಂದಿ ಕೊಳಚೆಯಲ್ಲಿ ಹೊರಳಲು ಹೋಯಿತು,” ಎಂಬ ಈ ಗಾದೆಗಳು ಇವರಿಗೆ ಸರಿಯಾಗಿ ಅನ್ವಯಿಸುತ್ತವೆ.


ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.


ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


“ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ; ಬಡಿದರೂ ನನಗೆ ತಿಳಿಯಲಿಲ್ಲ; ಎಚ್ಚರವಾಗುವುದು ಯಾವಾಗ? ಮತ್ತೆ ಒಂದು ಸಾರಿ ಕುಡಿಯುವೆನು” ಎಂದುಕೊಳ್ಳುವೆ.


ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವವನಿಗೆ ಸಮಾನ.


ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು.


ಅವರು ಕುಳಿತುಕೊಳ್ಳುವ ಮೇಜುಗಳ ಮೇಲೆಲ್ಲಾ ಹೊಲಸು ವಾಂತಿ ! ಸ್ವಚ್ಛವಾದ ಸ್ಥಳವಂತೂ ಕೊಂಚವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು