Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:12 - ಕನ್ನಡ ಸತ್ಯವೇದವು C.L. Bible (BSI)

12 ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:12
17 ತಿಳಿವುಗಳ ಹೋಲಿಕೆ  

ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲು ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಮೂಢನಿಗೆ ಅವನ ಮೂರ್ಖತನ ತಿಳಿಯುವಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.


ವಿವೇಕದಿಂದ ಉತ್ತರಿಸಬಲ್ಲ ಏಳು ಬುದ್ಧಿವಂತರಿಗಿಂತ ತಾನೇ ಜ್ಞಾನಿ ಎಂದುಕೊಳ್ಳುತ್ತಾನೆ ಸೋಮಾರಿ.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.


ಮೂರ್ಖನ ನಡತೆ ಸ್ವಂತ ಮೆಚ್ಚುಗೆಗೆ; ಬುದ್ಧಿವಂತ ಕಿವಿಗೊಡುವನು ಉಚಿತಾಲೋಚನೆಗೆ.


ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು