Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:25 - ಕನ್ನಡ ಸತ್ಯವೇದವು C.L. Bible (BSI)

25 ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸವಿಮಾತಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಅಸಹ್ಯಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವನು ಹೇಳುವ ಸಂಗತಿಗಳು ಒಳ್ಳೆಯದಾಗಿ ಕಂಡರೂ ಅವನನ್ನು ನಂಬಬೇಡಿ. ಅವನ ಹೃದಯವು ಕೆಟ್ಟ ಆಲೋಚನೆಗಳಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:25
11 ತಿಳಿವುಗಳ ಹೋಲಿಕೆ  

ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


“ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತ ಇಲ್ಲಿದ್ದಾನೆ, ಅಗೋ, ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿ.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.


ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ.


ಕೆಟ್ಟ ಹೃದಯದಿಂದ ಸವಿನುಡಿಯು ತುಟಿ, ಬೆಳ್ಳಿ ಮೆರುಗಿನಿಂದ ಥಳಿಸುವ ಮಣ್ಣಿನ ಬೋಕಿ.


ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.


ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. ಅವರಲ್ಲಿ ಸನ್ಬಲ್ಲಟ್ ಮತ್ತು ಗೆಷನರು ನನಗೆ, “ಓನೋ ಕಣಿವೆಯ ಹಕ್ಕೆಫಿರೀಮಿನಲ್ಲಿ ಒಬ್ಬರನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿ ಕಳುಹಿಸಿದರು. ಅವರು ನನಗೆ ಕೇಡು ಬಗೆಯುವವರು ಎಂದು ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು