Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:26 - ಕನ್ನಡ ಸತ್ಯವೇದವು C.L. Bible (BSI)

26 ಹಗೆಯನ್ನು ವಂಚನೆಯಿಂದ ಮರೆಮಾಚಿದ್ದರೂ ಸಭೆಯಲ್ಲಿ ಕೆಟ್ಟತನ ಬಟ್ಟಬಯಲಾಗದಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತನ್ನ ಹಗೆಯನ್ನು ವಂಚನೆಯಿಂದ ಮರೆಮಾಜಿಕೊಂಡಿದ್ದರೂ ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದ್ವೇಷವು ತನ್ನನ್ನು ಮೋಸದಿಂದ ಮರೆಮಾಡಿಕೊಳ್ಳುತ್ತದೆ. ಆದರೆ ಅವನು ಕೀಳಾದವನು; ಕೊನೆಯಲ್ಲಿ, ಅವನ ಕೆಟ್ಟಕಾರ್ಯಗಳನ್ನು ಜನರೆಲ್ಲರೂ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನ ಹಗೆತನವು ಮೋಸದಿಂದ ಮುಚ್ಚಲ್ಪಟ್ಟಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:26
9 ತಿಳಿವುಗಳ ಹೋಲಿಕೆ  

ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.


“ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.


ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.


ಬಟ್ಟಬಯಲಾಗದ ಮುಚ್ಚುಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ.


ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು