Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:27 - ಕನ್ನಡ ಸತ್ಯವೇದವು C.L. Bible (BSI)

27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೆ ಗುಂಡು ಹೊರಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮತ್ತೊಬ್ಬನಿಗೆ ಬಲೆಹಾಕುವವನು ತನಗೇ ಬಲೆಹಾಕಿಕೊಳ್ಳುವನು. ಮತ್ತೊಬ್ಬನ ಮೇಲೆ ಬಂಡೆ ಉರುಳಿಸಲು ಪ್ರಯತ್ನಿಸುವವನು ಅದರಿಂದಲೇ ಜಜ್ಜಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರುಗಿ ಹೊರಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:27
11 ತಿಳಿವುಗಳ ಹೋಲಿಕೆ  

ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು.


ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II


ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ಗೋಡೆ ಒಡೆಯುವವನನ್ನು ಹಾವು ಕಡಿಯುವುದು.


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು