Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:3 - ಕನ್ನಡ ಸತ್ಯವೇದವು C.L. Bible (BSI)

3 ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನಿಗಾದರೊ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕುದುರೆಗೆ ಚಬುಕಬೇಕು. ಹೇಸರಕತ್ತೆಗೆ ಕಡಿವಾಣಬೇಕು. ಮೂಢನಿಗೆ ಹೊಡೆತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕುದುರೆಗೆ ಬಾರುಗೋಲು, ಕತ್ತೆಗೆ ಕಡಿವಾಣವು, ಮೂಢನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:3
10 ತಿಳಿವುಗಳ ಹೋಲಿಕೆ  

ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.


ಬೆತ್ತವನ್ನು ಹಿಡಿದು ಬಿಗಿಯಲು ಬರಲೋ? ಅಥವಾ ಪ್ರೀತಿ ಸಹಾನುಭೂತಿಯಿಂದ ತುಂಬಿದವನಾಗಿ ಬರಲೋ? ನಿಮಗೆ ಯಾವುದು ಇಷ್ಟ?


‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II


ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಪಾಪಮಾಡಿದ್ದವರನ್ನೂ ಇತರರನ್ನೂ ಎಚ್ಚರಿಸಿದ್ದೆನು. ಈಗ ದೂರವಿದ್ದರೂ ಮತ್ತೆ ಎಚ್ಚರಿಸುತ್ತಿದ್ದೇನೆ. ಪುನಃ ನಾನು ಬರುವಾಗ ಅವರಾರನ್ನೂ ಶಿಕ್ಷಿಸದೆ ಬಿಡುವುದಿಲ್ಲ.


ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.


ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು.


ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.


ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.


ಮಂದಮತಿಗೆ ನೂರು ಗುದ್ದು; ಬುದ್ಧಿವಂತನಿಗೆ ಒಂದು ಮಾತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು