Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:17 - ಕನ್ನಡ ಸತ್ಯವೇದವು C.L. Bible (BSI)

17 ಕಬ್ಬಿಣ ಕಬ್ಬಿಣವನ್ನು ಹರಿತ ಮಾಡುವಂತೆ ಮಿತ್ರನು ಮಿತ್ರನ ಬುದ್ಧಿಯನ್ನು ಹರಿತಮಾಡಬಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಬ್ಬಿಣವು ಕಬ್ಬಿಣವನ್ನು ಹೇಗೋ ವಿುತ್ರನು ವಿುತ್ರನ ಬುದ್ಧಿಯನ್ನು ಹಾಗೆ ಹರಿತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:17
21 ತಿಳಿವುಗಳ ಹೋಲಿಕೆ  

ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.


ಆಗ ಸೌಲನ ಮಗ ಯೋನಾತಾನನು ಅಲ್ಲಿಗೆ ಹೋಗಿ,


ಕ್ರಿಸ್ತಯೇಸುವಿನ ನಿಷ್ಠಾವಂತ ಸೈನಿಕನಂತೆ ಕಷ್ಟದುಃಖಗಳನ್ನು ತಾಳ್ಮೆಯಿಂದ ಸಹಿಸಿಕೋ.


ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು.


ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಅಂಥವಳನ್ನು ಅಡಗಿಸಬಲ್ಲವನು ಗಾಳಿಯನ್ನು ಅಡಗಿಸಬಲ್ಲ, ಕೈ ಎಣ್ಣೆಜಿಡ್ಡನ್ನೂ ಬಿಗಿಹಿಡಿಯಬಲ್ಲ.


ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.


ಕೋಪಿಷ್ಠನು ಜಗಳವೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ಇದನ್ನು ಕೇಳಿದ ಮರಿಯಳು ತಟ್ಟನೆ ಎದ್ದು ಯೇಸುವನ್ನು ಕಾಣಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು