Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:20 - ಕನ್ನಡ ಸತ್ಯವೇದವು C.L. Bible (BSI)

20 ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಾತಾಳಕ್ಕೂ ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ ಹಾಗೆ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:20
15 ತಿಳಿವುಗಳ ಹೋಲಿಕೆ  

ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.


ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ಮಾನವನು ಪಡುವ ಪ್ರಯಾಸವೆಲ್ಲ ಅವನ ಹೊಟ್ಟೆಪಾಡಿಗಾಗಿಯೇ. ಆದರೂ ಅವನಿಗೆ ತೃಪ್ತಿಯಿಲ್ಲ.


ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?


ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.


ನೀರು ಮುಖಕ್ಕೆ ಮುಖವನ್ನು ಪ್ರತಿಬಿಂಬಿಸುತ್ತದೆ; ಹೃದಯ ಮನುಷ್ಯನಿಗೆ ಮನುಷ್ಯನನ್ನು ತೋರ್ಪಡಿಸುತ್ತದೆ.


ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.


ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು