Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:6 - ಕನ್ನಡ ಸತ್ಯವೇದವು C.L. Bible (BSI)

6 ಮಿತ್ರನು ಕೊಡುವ ಗುದ್ದು ಹಿತಕರ; ಶತ್ರುವು ಕೊಡುವ ಮುದ್ದು ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ವಿುತ್ರನು ಮಾಡುವ ಗಾಯಗಳು ಮೇಲಿಗಾಗಿಯೇ; ಶತ್ರುವಿನ ಮುದ್ದುಗಳು ಹೇರಳವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸ್ನೇಹಿತನಿಂದಾಗುವ ಗಾಯಗಳು ಸಹಾಯಕರ. ಶತ್ರುವಿನ ಮುತ್ತುಗಳಾದರೋ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು; ಆದರೆ ಶತ್ರುವಿನ ಮುದ್ದುಗಳು ಹೇರಳವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:6
12 ತಿಳಿವುಗಳ ಹೋಲಿಕೆ  

ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ.


ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.


ಗಾಯಗೊಳಿಸುವ ಏಟು ಕೆಟ್ಟದ್ದನ್ನು ತೊಳೆಯಬಲ್ಲ ಮದ್ದು; ಅಂತರಂಗವನ್ನೂ ಮುಟ್ಟಬಲ್ಲದು ಆ ಪೆಟ್ಟು.


ಹೊಟ್ಟೆ ತುಂಬಿದವನಿಗೆ ಜೇನುಕೊಟ್ಟರೂ ಕಹಿ; ಹೊಟ್ಟೆ ಹಸಿದವನಿಗೆ ಏನು ಕೊಟ್ಟರು ಸಿಹಿ.


ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು