Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:7 - ಕನ್ನಡ ಸತ್ಯವೇದವು C.L. Bible (BSI)

7 ಹೊಟ್ಟೆ ತುಂಬಿದವನಿಗೆ ಜೇನುಕೊಟ್ಟರೂ ಕಹಿ; ಹೊಟ್ಟೆ ಹಸಿದವನಿಗೆ ಏನು ಕೊಟ್ಟರು ಸಿಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ; ಹೊಟ್ಟೆಹಸಿದವನಿಗೆ ಕಹಿಯೆಲ್ಲಾ ಸಿಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೊಟ್ಟೆ ತುಂಬಿದವನು ಜೇನುತುಪ್ಪವನ್ನೂ ತಿರಸ್ಕರಿಸುವನು; ಹಸಿವೆಗೊಂಡಿರುವವನಿಗೋ ಕಹಿಯೂ ಸಿಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತೃಪ್ತಿ ಹೊಂದಿದವನು ಜೇನುತುಪ್ಪವನ್ನೂ ಅಸಹ್ಯಿಸಿಕೊಳ್ಳುತ್ತಾನೆ; ಆದರೆ ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:7
9 ತಿಳಿವುಗಳ ಹೋಲಿಕೆ  

ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು.


“ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.


ಮುಟ್ಟಲು ಕೂಡ ಅಸಹ್ಯವಾದುವು ಕಾಯಿಲೆಯಲ್ಲಿ ನನಗೆ ಆಹಾರವಾದವು.


ಮಗನೇ, ಜೇನು ತಿನ್ನು, ಅದು ಚೆನ್ನಾಗಿದೆ; ತೊಟ್ಟಿಕ್ಕುವ ಜೇನುತುಪ್ಪ ನಿನ್ನ ಬಾಯಿಗೆ ಸಿಹಿ ಅಲ್ಲವೇ?


ಮಿತ್ರನು ಕೊಡುವ ಗುದ್ದು ಹಿತಕರ; ಶತ್ರುವು ಕೊಡುವ ಮುದ್ದು ಮೋಸಕರ.


ಮನೆಬಿಟ್ಟು ಅಲೆಯುವ ವ್ಯಕ್ತಿ, ಗೂಡುಬಿಟ್ಟು ಅಲೆಯುವ ಹಕ್ಕಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು