Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:10 - ಕನ್ನಡ ಸತ್ಯವೇದವು C.L. Bible (BSI)

10 ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳಿಗೋ ಸುಖವು ಸೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಥಾರ್ಥವಂತರನ್ನು ದಾರಿತಪ್ಪಿಸಿ ಅಪಾಯದ ಮಾರ್ಗದಲ್ಲಿ ನಡೆಸುವವನು ತಾನು ತೋಡಿದ ಗುಂಡಿಗೆ ತಾನೇ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:10
28 ತಿಳಿವುಗಳ ಹೋಲಿಕೆ  

ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೆ ಗುಂಡು ಹೊರಳುವುದು.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ನೀತಿವಂತನ ಮನೆಯೊಳು ನಿಧಿನಿಕ್ಷೇಪ; ಅನೀತಿವಂತನ ಆದಾಯ ದುಃಖತಾಪ.


ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.


ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ಗೋಡೆ ಒಡೆಯುವವನನ್ನು ಹಾವು ಕಡಿಯುವುದು.


ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.


ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.


ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II


ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II


ಸತ್ಯವಂತರು ನಾಡಿನಲ್ಲಿ ಬಾಳುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.


ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು