Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:11 - ಕನ್ನಡ ಸತ್ಯವೇದವು C.L. Bible (BSI)

11 ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಐಶ್ವರ್ಯವಂತನು ತಾನೇ ಬುದ್ಧಿವಂತನೆಂದು ಭಾವಿಸುತ್ತಾನೆ. ವಿವೇಕಿಯಾದ ಬಡವನಾದರೋ ಸತ್ಯವನ್ನು ಕಾಣಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:11
18 ತಿಳಿವುಗಳ ಹೋಲಿಕೆ  

ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ವಿವೇಕದಿಂದ ಉತ್ತರಿಸಬಲ್ಲ ಏಳು ಬುದ್ಧಿವಂತರಿಗಿಂತ ತಾನೇ ಜ್ಞಾನಿ ಎಂದುಕೊಳ್ಳುತ್ತಾನೆ ಸೋಮಾರಿ.


ಮೊದಲು ವಾದಿಸುವವನು ನ್ಯಾಯವಾದಿಯೆಂದೇ ತೋರುವನು; ಅವನ ಬಂಡವಾಳ ಗೊತ್ತಾಗುವುದು ಪ್ರತಿವಾದಿ ಎದ್ದ ಮೇಲೆ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ಮೂಢನಿಗೆ ಅವನ ಮೂರ್ಖತನ ತಿಳಿಯುವಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.


ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ.


ವಯೋವೃದ್ಧರು ಮಾತ್ರ ಜ್ಞಾನಿಗಳಲ್ಲ ಮುದುಕರು ಮಾತ್ರ ನ್ಯಾಯಬಲ್ಲವರಲ್ಲ.


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು