Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:18 - ಕನ್ನಡ ಸತ್ಯವೇದವು C.L. Bible (BSI)

18 ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಪತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೋ ಇದ್ದಕ್ಕಿದ್ದಂತೆ ಹಾಳಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:18
18 ತಿಳಿವುಗಳ ಹೋಲಿಕೆ  

ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.


ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.


ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಆಗ ಸರ್ವೇಶ್ವರನ ದೂತ, “ಮೂರು ಸಾರಿ ನಿನ್ನ ಕತ್ತೆಯನ್ನೇಕೆ ಹೊಡೆದೆ? ನೀನು ಹಿಡಿದ ಮಾರ್ಗ ಸರಿಯಲ್ಲ. ನಿನ್ನನ್ನು ತಡೆಗಟ್ಟಲು ನಾನೇ ಬಂದೆ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.


ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II


ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.


ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಮುಂದಾಳುಗಳ ಜೊತೆಯಲ್ಲಿ ಹೊರಟನು.


ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು.


ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು