Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:2 - ಕನ್ನಡ ಸತ್ಯವೇದವು C.L. Bible (BSI)

2 ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇಶವು ಅಧರ್ಮದಿಂದ ಬಹುನಾಯಕವಾಗುವದು; ಜ್ಞಾನಿಗಳೂ ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:2
14 ತಿಳಿವುಗಳ ಹೋಲಿಕೆ  

ಬಾಷನು ಜುದೇಯದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.


ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಆಗ ಅಲ್ಲಿದ್ದವರು ತಮ್ಮಲ್ಲೇ ಒಬ್ಬ. ಜ್ಞಾನಿಯನ್ನು ಕಂಡುಹಿಡಿದರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದ. ಆದರೆ ಆ ಬಡಜ್ಞಾನಿಯನ್ನು ಆಮೇಲೆ ಯಾರೂ ಸ್ಮರಿಸಲಿಲ್ಲ.


ಯೆಹೂದ್ಯರ ಅರಸ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.


ಸತ್ಪುರುಷರ ಆಶೀರ್ವಾದದಿಂದ ಪುರೋದ್ಧಾರ; ದುಷ್ಟಜನರ ಕೆಟ್ಟ ಬಾಯಿಂದ ಅದರ ಸಂಹಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು