Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:21 - ಕನ್ನಡ ಸತ್ಯವೇದವು C.L. Bible (BSI)

21 ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪಕ್ಷಪಾತವು ಅಧರ್ಮ; ತುತ್ತನ್ನಕ್ಕಾಗಿ ಜನರು ದ್ರೋಹಮಾಡುವದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪಕ್ಷಪಾತ ತಪ್ಪು. ಕೆಲವರಾದರೋ ಒಂದು ತುಂಡು ರೊಟ್ಟಿಗಾಗಿಯೂ ತಪ್ಪು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:21
11 ತಿಳಿವುಗಳ ಹೋಲಿಕೆ  

ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ಜ್ಞಾನಿಗಳ ಬೇರೆ ಕೆಲವು ಹೇಳಿಕೆಗಳು ಇವು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತ ಸರಿಯಲ್ಲ.


ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.


ಲಂಚವನ್ನು ತೆಗೆದುಕೊಳ್ಳಬಾರದು. ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿಸುತ್ತದೆ; ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ಕೆಡಿಸುತ್ತದೆ.


ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ಅವರು ಮದ್ಯಪಾನವನ್ನು ಮಾಡಿದ ನಂತರ ವ್ಯಭಿಚಾರಕ್ಕೆ ಇಳಿಯುತ್ತಾರೆ. ಮಾನಕ್ಕಿಂತ ಅವಮಾನವೇ ಅವರಿಗೆ ಅತಿ ಪ್ರಿಯ.


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು