Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:22 - ಕನ್ನಡ ಸತ್ಯವೇದವು C.L. Bible (BSI)

22 ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು; ತನಗೆ ಕೊರತೆಯಾಗುವದೆಂದು ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:22
11 ತಿಳಿವುಗಳ ಹೋಲಿಕೆ  

ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


ಜಿಪುಣ ದೃಷ್ಟಿಯವನು ಬಡಿಸುವ ಅನ್ನವನ್ನು ಉಣಬೇಡ; ಅವನ ರುಚಿಪದಾರ್ಥಗಳನ್ನು ಬಯಸಬೇಡ.


ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.


ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ.


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.


ಶ್ರಮಜೀವಿಗಳ ಯೋಜನೆಯಿಂದ ಸಮೃದ್ಧಿ; ತಾಳ್ಮೆಯಿಲ್ಲದ ತ್ವರೆಯಿಂದ ಅಧೋಗತಿ.


ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು