Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:23 - ಕನ್ನಡ ಸತ್ಯವೇದವು C.L. Bible (BSI)

23 ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮುಖಸ್ತುತಿ ಮಾಡುವವನಿಗಿಂತಲೂ ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಗದರಿಸುವವನು ಸ್ವಲ್ಪಕಾಲದ ನಂತರ ಮುಖಸ್ತುತಿ ಮಾಡುವವನಿಗಿಂತಲೂ ಹೆಚ್ಚಾಗಿ ಗೌರವಿಸಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:23
12 ತಿಳಿವುಗಳ ಹೋಲಿಕೆ  

“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.


ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.


ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗ ನಮಸ್ಕಾರ ಮಾಡಿದನು.


ಆಗ ನಾತಾನನು ದಾವೀದನನ್ನು ದಿಟ್ಟಿಸಿ, “ಆ ಮನುಷ್ಯ ನೀನೇ. ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಹೇಳುವುದು ಇದು: ‘ನಿನ್ನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದವನು ನಾನು; ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.


ತಪ್ಪುಮಾಡಿದವರನ್ನು ದಂಡಿಸುವವರಿಗೆ ಶುಭವಾಗುವುದು, ಸುಖಕರವಾದ ಆಶೀರ್ವಾದವು ಅವರಿಗೆ ಲಭಿಸುವುದು.


ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.


ಮುಖಸ್ತುತಿ ಮಾಡಲು ನನ್ನಿಂದಾಗುವುದಿಲ್ಲ. ಮಾಡಿದರೆ ಸೃಷ್ಟಿಕರ್ತ ನನ್ನನು ಬೇಗ ನಿರ್ಮೂಲಮಾಡಬಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು