Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:24 - ಕನ್ನಡ ಸತ್ಯವೇದವು C.L. Bible (BSI)

24 “ಅದು ತಪ್ಪಲ್ಲ” ಎಂದು ಹೆತ್ತವರ ಆಸ್ತಿಯನ್ನು ಕದಿಯುವವನು ಕೊಳ್ಳೆ ಹೊಡೆಯುವವರ ಸಂಗಡಿಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು ಕೇಡಿಗನಿಗೆ ಜೊತೆಗಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕೆಲವರು ತಮ್ಮ ತಂದೆತಾಯಿಗಳಿಂದ ಕದ್ದುಕೊಂಡು, “ಅದು ತಪ್ಪಲ್ಲ” ಎಂದು ಹೇಳುವರು. ಆದರೆ ಆ ವ್ಯಕ್ತಿಯು ಮನೆಯೊಳಗೆ ನುಗ್ಗಿ ಸರ್ವಸ್ವವನ್ನು ನಾಶಮಾಡುವ ವ್ಯಕ್ತಿಯಂತೆಯೇ ಕೆಟ್ಟವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:24
8 ತಿಳಿವುಗಳ ಹೋಲಿಕೆ  

ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು ನಿಂದೆ ಅವಮಾನಗಳಿಗೆ ತುತ್ತಾಗುವನು.


ಸೋಮಾರಿಯಾದ ಕೆಲಸಗಳ್ಳನು, ಕೆಡುಕನಿಗೆ ರಕ್ತಸಂಬಂಧಿಕನು.


ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.


ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು