Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:5 - ಕನ್ನಡ ಸತ್ಯವೇದವು C.L. Bible (BSI)

5 ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೆಟ್ಟವರು ನ್ಯಾಯವನ್ನು ಗ್ರಹಿಸರು; ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೋ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:5
18 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಜ್ಞಾನವು ಮೂರ್ಖನಿಗೆ ಎಟುಕದಷ್ಟು ಎತ್ತರ; ನ್ಯಾಯಸ್ಥಾನದಲ್ಲಿ ಅವನು ಬಾಯಿಬಿಡಲಾರ.


ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.


ನಿನ್ನ ನಿಯಮಗಳನು ಕೈಗೊಂಡುದರಿಂದ I ನಾನಧಿಕ ವಿವೇಕಿ ಗುರುಹಿರಿಯರಿಗಿಂತ II


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಆಗ ನೀತಿನ್ಯಾಯಗಳನ್ನು ನೀನರಿತುಕೊಳ್ಳುವೆ, ಸಕಲ ಸನ್ಮಾರ್ಗಸತ್ಯತೆಗಳನ್ನೂ ತಿಳಿದುಕೊಳ್ಳುವೆ.


ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು : ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ನಿನ್ನಾಜ್ಞೆಗಳು ಸದಾ ನನ್ನೊಂದಿಗಿರುವುದರಿಂದ I ನಾನಧಿಕ ಬುದ್ಧಿವಂತ ನನ್ನ ಶತ್ರುಗಳಿಗಿಂತ II


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು