Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:8 - ಕನ್ನಡ ಸತ್ಯವೇದವು C.L. Bible (BSI)

8 ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದುಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:8
13 ತಿಳಿವುಗಳ ಹೋಲಿಕೆ  

ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು.


ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.


“ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.


ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು,” ಎಂದನು.


ದೀನದರಿದ್ರರಿಗೆ ದಯೆಯ ತೋರುವನು I ದಲಿತರ ಪ್ರಾಣವನು ಕಾಪಾಡುವನು II


ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು