Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:9 - ಕನ್ನಡ ಸತ್ಯವೇದವು C.L. Bible (BSI)

9 ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರ ಉಪದೇಶವನ್ನು ತಿರಸ್ಕರಿಸುವವನ ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:9
15 ತಿಳಿವುಗಳ ಹೋಲಿಕೆ  

ಕೆಟ್ಟತನವನು ನಾ ಮನದಲ್ಲಿಟ್ಟಿದ್ದರೆ I ಮುಟ್ಟುವಂತಿರಲಿಲ್ಲ ಆತನಿಗೆ ಎನ್ನ ಮೊರೆ II


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಅಪರಾಧಿಯಾಗಲಿ ಅವನು ನ್ಯಾಯವಿಚಾರಣೆಯಲಿ I ಅವನ ಪ್ರಾರ್ಥನೆಯೂ ಪಾಪವಾಗಿ ಎಣಿಸಲ್ಪಡಲಿ II


ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?


ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.


ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.


ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ಇಗೋ, ನೀವು ಶೂನ್ಯರೇ ಸರಿ, ನಿಮ್ಮ ಕಾರ್ಯವು ವ್ಯರ್ಥವೇ, ಸರಿ ನಿಮ್ಮನ್ನು ಮರೆಹೋಗುವವರು ತುಚ್ಛರೇ ಸರಿ !


ಅನ್ಯಾಯಸ್ಥಾಪಕರಿಗೂ ನಿನಗೂ ಸಂಬಂಧವೆಲ್ಲಿ I ಕೇಡನು ಕಲ್ಪಿಸುತ್ತಾರವರು ಶಾಸನದ ಹೆಸರಿನಲ್ಲಿ II


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು