Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:14 - ಕನ್ನಡ ಸತ್ಯವೇದವು C.L. Bible (BSI)

14 ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಡವರನ್ನು ನ್ಯಾಯವಾಗಿ ಆಳುವ ರಾಜನ ಸಿಂಹಾಸನವು ಶಾಶ್ವತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಡಜನರಿಗೆ ನ್ಯಾಯದೊರಕಿಸುವ ರಾಜನು ಬಹುಕಾಲ ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:14
18 ತಿಳಿವುಗಳ ಹೋಲಿಕೆ  

ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.


ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.


ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ.


ಅಂತೆಯೆ ರಾಜನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ರಾಜ್ಯಭಾರ ನೀತಿಯಾಧಾರದಿಂದ ಸುಸ್ಥಿರ.


ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು