Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:16 - ಕನ್ನಡ ಸತ್ಯವೇದವು C.L. Bible (BSI)

16 ದುಷ್ಟರ ವೃದ್ಧಿ ಪಾಪಾಭಿವೃದ್ಧಿ; ಅವರ ಪತನವನ್ನು ಸಜ್ಜನರು ಕಣ್ಣಾರೆ ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದುಷ್ಟರ ವೃದ್ಧಿ ಪಾಪವೃದ್ಧಿ, ಶಿಷ್ಟರೋ ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದುಷ್ಟರ ವೃದ್ಧಿ ಪಾಪವೃದ್ಧಿ; ಶಿಷ್ಟರೋ ಅವರ ಪತನವನ್ನು ಕಣ್ಣಾರೆ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕೆಡುಕರು ದೇಶವನ್ನು ಆಳುತ್ತಿದ್ದರೆ, ಎಲ್ಲೆಲ್ಲೂ ಪಾಪವಿರುವುದು. ಆದರೆ ಒಳ್ಳೆಯವರಿಗೆ ಕೊನೆಯಲ್ಲಿ ಜಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದುಷ್ಟರು ವೃದ್ಧಿಯಾದಾಗ, ಪಾಪವು ವೃದ್ಧಿಯಾಗುತ್ತದೆ. ಆದರೆ ನೀತಿವಂತರು ದುಷ್ಟರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:16
11 ತಿಳಿವುಗಳ ಹೋಲಿಕೆ  

ನಾ ಕಣ್ಣಾರೆ ಕಂಡಿರುವೆ ಶತ್ರುಗಳಿಗಾದ ದುರ್ಗತಿಯನು I ಕಿವಿಯಾರೆ ಕೇಳಿರುವೆ ನನ್ನ ವಿರೋಧಿಗಳಿಗಾದ ವಿಪತ್ತನು II


ನೀನಿದನು ಕಣ್ಣಾರೆ ಕಾಣುವೆ I ದುರುಳರ ದಂಡನೆಯನು ನೋಡುವೆ II


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ದೃಢವಿದೆ ಅವನ ಮನ, ಎದೆಗುಂದನವನು I ಕಾಣುವನು ದುರುಳರಿಗಾಗುವ ದಂಡನೆಯನು II


ಕಾಡುಕೋಣದ ಕೊಂಬಿನ ಬಲವನು ನನಗಿತ್ತಿರುವೆ I ಚೈತನ್ಯದ ತೈಲದಿಂದ ನನ್ನನು ಅಭ್ಯಂಜಿಸಿರುವೆ II


ಸತ್ಯಸ್ವರೂಪನ ದೃಷ್ಟಿ ದುಷ್ಟರ ಮನೆಯ ಮೇಲೆ; ಆ ದುರುಳರನ್ನು ದಬ್ಬಿಬಿಡುವನು ಕೇಡಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು