Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:24 - ಕನ್ನಡ ಸತ್ಯವೇದವು C.L. Bible (BSI)

24 ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು; ಆಣೆಯಿಡುವದನ್ನು ಕೇಳಿದರೂ ಸುಮ್ಮನಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕಳ್ಳನ ಸಂಗಡಿಗನು ತನಗೆ ತಾನೆ ಕಡುವೈರಿ. ಸಾಕ್ಷಿ ಹೇಳದ ಜನರಿಗೆ ಬರತಕ್ಕ ಶಾಪದ ಬಗ್ಗೆ ಕೇಳಿದರೂ ಅವನು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:24
11 ತಿಳಿವುಗಳ ಹೋಲಿಕೆ  

“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.


ವ್ಯಭಿಚಾರಿಯು ಕೇವಲ ಬುದ್ಧಿಶೂನ್ಯನು; ತನ್ನೀ ಕೃತ್ಯದಿಂದ ಸ್ವನಾಶಮಾಡಿಕೊಳ್ಳುವನು.


ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು; ಅವನನ್ನು ಕೆಣಕುವವನು ಪ್ರಾಣಕ್ಕೆ ಅಪಾಯ ತಂದುಕೊಳ್ವನು.


ಯೋನಾತಾನನು ಅವನಿಗೆ, “ಇದು ಎಂದಿಗೂ ಆಗಲೇಬಾರದು; ನಿನಗೆ ಮರಣವಾಗಕೂಡದು. ನನ್ನ ತಂದೆ ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವುದಿಲ್ಲ; ಇಂಥ ಕಾರ್ಯವನ್ನು ನನಗೆ ಹೇಗೆ ಮರೆಮಾಡಿಯಾರು? ಇಲ್ಲ, ಇದು ನಿಜವಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು